ಹುಬ್ಬಳ್ಳಿ : ಲೋಕಸಭಾ ಚುನಾವಣೆ ಮುಂದಿರುವಂತೆಯೇ ಪಕ್ಷಾಂತರ ಪರ್ವದ ಸುಳಿವು ನೀಡಿದ ಡಿ.ಕೆ. ಶಿವಕುಮಾರ್, ಸ್ಥಳೀಯ ಕಾರ್ಯಕರ್ತರನ್ನೂ ಸಹ ಪಕ್ಷಕ್ಕೆ ಸ್ವಾಗತಿಸುವಂತೆ ಮುಖಂಡರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಅವರೊಬ್ಬರೇ ಅಲ್ಲ. ಇನ್ನೂ ಸಾಕಷ್ಟು ಮಂದಿ ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸುಳಿವು ನೀಡಿದರು. ಬುಧವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಯಾರು ಯಾರು ಕಾಂಗ್ರೆಸ್ ಸೇರುತ್ತಿದ್ದಾರೋ, ಅವರ ಹೆಸರುಗಳನು ಸಧ್ಯಕ್ಕೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಉತ್ತರ ಕನ್ನಡದಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಯ ಬಗ್ಗೆ ಇಂದು ಸ್ಥಳೀಯ ನಾಯಕರು, ಶಾಸಕರು ಹಾಗೂ ಸಚಿವರೊಂದಿಗೆ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ. ಬಿಜೆಪಿಯಿಂದ ಅನಂತ್ ಕುಮಾರ್ ಹೆಗಡೆ ಸ್ಪರ್ಧಿಸುತ್ತಿರುವುದರಿಂದ ಪ್ರಭಾವಿ ನಾಯಕರನ್ನೇ ಕಾಂಗ್ರೆಸ್ ಕಣಕ್ಕಿಳಿಸುವ ಸಾಧ್ಯತೆಯಿದೆ.