Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ತಾರಾ ಪ್ರಚಾರಕರ ಪಟ್ಟಿಯಲ್ಲಿ ಹೆಗಡೆಗೆ ಆರನೇ ಸ್ಥಾನ- ಬಿಜೆಪಿಯಲ್ಲಿ ಅಸಮಾಧಾನ

ತಾರಾ ಪ್ರಚಾರಕರ ಪಟ್ಟಿಯಲ್ಲಿ ಹೆಗಡೆಗೆ ಆರನೇ ಸ್ಥಾನ- ಬಿಜೆಪಿಯಲ್ಲಿ ಅಸಮಾಧಾನ
ಬೆಂಗಳೂರು , ಮಂಗಳವಾರ, 30 ಜನವರಿ 2018 (07:31 IST)

ಕರ್ನಾಟಕದ ವಿಧಾನಸಭೆ ಚುನಾವಣೆಗೆ ಬಿಜೆಪಿ ವರಿಷ್ಠರು ಸಿದ್ಧಪಡಿಸಿರುವ ತಾರಾ ಪ್ರಚಾರಕರ ಪಟ್ಟಿಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆಗೆ ಆರನೇ ಸ್ಥಾನ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ ಹಾಗೂ ಅನಂತಕುಮಾರ ಹೆಗಡೆ ಅವರಿಗೆ ಕ್ರಮವಾಗಿ ಮೊದಲಿನ ಆರು ಸ್ಥಾನಗಳನ್ನು ನೀಡಿ ಒಟ್ಟು 75 ಜನರ ತಾರಾ ಪ್ರಚಾರಕರ ಪಟ್ಟಿ ತಯಾರಿಸಲಾಗಿದೆ.

ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ರಮೇಶ ಜಿಗಜಿಣಗಿ, ಸುಷ್ಮಾ ಸ್ವರಾಜ್, ನಿರ್ಮಲಾ ಸೀತಾರಾಮನ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹಾಗೂ ಕೆ.ಎಸ್.ಈಶ್ವರಪ್ಪ ಅವರಿಗೆ ಹೆಗಡೆ ನಂತರದ ಸ್ಥಾನ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ತಾರಾ ಪ್ರಚಾರಕರ ಪಟ್ಟಿ ತಯಾರಿಸುವಾಗ ಶಿಷ್ಠಾಚಾರ ಪಾಲನೆ ಮಾಡಿಲ್ಲ ಎಂದು ಹೇಳಲಾಗಿದ್ದು, ಪ್ರಚೋದನಕಾರಿ ಹೇಳಿಕೆ ನೀಡಿ ವಿವಾದ ಹುಟ್ಟುಹಾಕುವ ಅನಂತಕುಮಾರ ಹೆಗಡೆ ಅವರಿಂದ ಪಕ್ಷಕ್ಕೆ ಅನುಕೂಲ ಕಡಿಮೆ. ಆದರೂ ಅವರಿಗೆ ಆರನೇ ಸ್ಥಾನ ನೀಡಿರುವುದು ಸಮಂಜಸವಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಖಚಿತ