ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗಡಿ ಭಾಗ ತಿಪ್ಪೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.ಗಜಪಡೆಗಳು ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿದ್ದು, ತಿಪ್ಪೂರು ಗ್ರಾಮ ಸೇರಿ ಮಾದಾಪುರದೊಡ್ಡಿ ಗ್ರಾಮದಲ್ಲಿ ಆನೆಗಳು ಬೆಳೆ ಹಾನಿ ಮಾಡಿವೆ. ಜಮೀನಿನಲ್ಲಿ ರೈತರು ಬೆಳೆದಿದ್ದ ಟೊಮ್ಯಾಟೊ, ಬಾಳೆ ಬೆಳೆಗಳು ನಾಶವಾಗಿವೆ. ಬೆಳೆದ ಬೆಳೆ ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ. ರೈತರ ಜಮೀನಿನಲ್ಲೆ ಆನೆಗಳ ಗುಂಪು ಬೀಡುಬಿಟ್ಟಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಿದೆ. ಅರಣ್ಯ ಪ್ರದೇಶಕ್ಕೆ ಆನೆಗಳನ್ನ ಓಡಿಸಲು ಅರಣ್ಯಾಧಿಕಾರಿಗಳು ಹರಸಾಹಸ ಪಟ್ರು