ಧಾರವಾಡದ ಎಸ್‍ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಎಸ್‍ಡಿಎಂ ಕಾಲೇಜಿನ ವೈದ್ಯರು, ನರ್ಸ್‍ಗಳು, ರೋಗಿಗಳನ್ನು ಕೂಡ ಪರೀಕ್ಷೆಗೊಳಪಡಿಸುತ್ತಿದ್ದೇವೆ. ಹೊರರೋಗಿ ವಿಭಾಗವನ್ನು ಸಂಪೂರ್ಣವಾಗಿ ಸದ್ಯ ನಿಲ್ಲಿಸಲಾಗಿದೆ. ಅದೇ ರೀತಿ ಮೈಸೂರಿನಲ್ಲಿ ಕೂಡ ಕಂಟೈನ್ ಮೆಂಟ್ ಝೋನ್ ಮಾಡಿ ಕ್ರಮವನ್ನು ತೆಗೆದುಕೊಂಡಿದ್ದೇವೆ. ತೀವ್ರ ನಿಗಾದಲ್ಲಿರಿಸಿ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಕೊರೋನಾ ಪಾಸಿಟಿವ್ ಬಂದವರಿಗೆ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಎಂದರು.
ಕೋವಿಡ್ ಹೆಚ್ಚು ಕಂಡುಬಂದಿರುವ ಧಾರಾವಾಡ, ಬೆಂಗಳೂರು ಹಾಸ್ಟೆಲ್ ಗಳಲ್ಲಿ ಎಚ್ಚರಿಕೆ ವಹಿಸಲಾಗಿದೆ ಹಾಸ್ಟಲ್ ಗಳನ್ನ ಕಂಟೋನ್ಮೆಂಟ್ ಜೋನ್ ಆಗಿ ಮಾಡಿದ್ದೆವೆ. ಯಾರು ಯಾರಿಗೆ ಪಾಸಿಟಿವ್ ಬಂದಿದೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಅಲ್ಲಿ ಎಲ್ಲರಿಗೂ ಟೆಸ್ಟ್ ಮಾಡಿ ನಿರ್ಬಂಧ ಹೇರಿದ್ದೇವೆ ಎಂದರು.