Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗೆ ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಹೈಕಮಾಂಡ್ ನಿರ್ಧಾರ

ಬೆಂಗಳೂರು
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಲಯದಲ್ಲಿ ಹೊಸ ತಂತ್ರಗಾರಿಕೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.



ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ನಿರ್ಧಾರ ಮಾಡಿದ್ದು, ಬೆಂಗಳೂರು, ಬೆಳಗಾವಿ, ಮೈಸೂರು ರಾಜ್ಯದ 3 ಕಂದಾಯ ವಿಭಾಗಗಳಿಗೆ ನೇಮಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


ಶಾಸಕರಾದ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಕೃಷ್ಣ ಭೈರೇಗೌಡರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲು ಚಿಂತನೆ ನಡೆಸಿದ್ದು, ಡಿಕೆಶಿಗೆ ಅಧ್ಯಕ್ಷ ಸ್ಥಾನ ತಪ್ಪಿದರೆ ಕಾರ್ಯಾಧ್ಯಕ್ಷ ಸ್ಥಾನ ನೀಡಲು ನಿರ್ಧಾರ ಮಾಡಲಾಗಿದೆ. ಜಾತಿವಾರು ಲೆಕ್ಕಚಾರದಲ್ಲಿ ಕಾರ್ಯಾಧ್ಯಕ್ಷ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಕೆಲ ಕೈ ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ