ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಬಿಜೆಪಿ ಪಕ್ಷದ ಹೈಕಮಾಂಡ್ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ. ವಿಜಯಪುರ ಅಥವಾ ಬಾಗಲಕೋಟೆಯಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರ ತೀವ್ರ ಒತ್ತಡವಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೇ ಅದಕ್ಕೆ ಬದ್ಧವಾಗಿದ್ದೇನೆ ಎಂದರು.
ಉತ್ತರ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸಿದಲ್ಲಿ ನೆರೆಯ 10 ರಿಂದ 12 ಜಿಲ್ಲೆಗಳಲ್ಲಿ ಪಕ್ಷಕ್ಕೆ ಪ್ರಯೋಜನವಾಗಲಿದೆ. ಆದ್ದರಿಂದ, ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಸ್ಥಾನ ಗೆಲ್ಲಲೇಬೇಕು ಎನ್ನುವ ಗುರಿಯಿದೆ. ಮುಂದಿನ ಬಾರಿ ಬಿಜೆಪಿ ಸರಕಾರ ರಚಿಸುವುದು ಖಚಿತವಾಗಿದೆ. ಜನವಿರೋಧಿ, ರೈತ ವಿರೋಧಿ ಸರಕಾರವನ್ನು ಮತದಾರರು ಕಿತ್ತೊಗೆಯಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.