Webdunia - Bharat's app for daily news and videos

Install App

ಸಚಿವ ಡಿ.ಕೆ.ಶಿ ಗೆ ಹೊಸ ಜವಾಬ್ದಾರಿ ನೀಡಿದ ಹೈಕಮಾಂಡ್!

Webdunia
ಶನಿವಾರ, 24 ನವೆಂಬರ್ 2018 (16:09 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ನ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸುಲಲಿತವಾಗಿ ಸರಕಾರ ಮುನ್ನಡೆಸುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ.

ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅಪಸ್ವರಕ್ಕೆ ಆಸ್ಪದ ನೀಡದಂತೆ ಉಭಯ ಪಕ್ಷಗಳ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರಕ್ಕೆ ಯಾವುದೇ ರೀತಿಯ ಆಪತ್ತು ಬರದಂತೆ ಸಂಭಾಳಿಸುವ ಜವಾಬ್ದಾರಿಯನ್ನು ಪ್ರಭಾವಿ ಸಚಿವರೆಂದೇ ಗುರುತಿಸಿಕೊಂಡಿರುವ ಡಿ.ಕೆ ಶಿವಕುಮಾರ್ ಅವರ ಹೆಗಲಿಗೆ ಕಾಂಗ್ರೆಸ್ ಹೈಕಮಾಂಡ್ ವಹಿಸಿದೆ.

`ಟ್ರಬಲ್ ಶೂಟರ್ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆಯುಂಟಾಗದಂತೆ ನೋಡಿಕೊಳ್ಳಬೇಕು. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಉಭಯ ಪಕ್ಷಗಳ ಸಚಿವರು, ಶಾಸಕರಲ್ಲಿ ಅಸಮಾಧಾನವುಂಟಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೈಕಮಾಂಡ್ ಕಿವಿಮಾತು ಹೇಳಿದೆ.

ತೆಂಲಗಾಣ ರಾಜ್ಯ ವಿಧಾನಸಭೆಯ ಚುನಾವಣಾ ಪ್ರಚಾರಕ್ಕಾಗಿ  ಆ ರಾಜ್ಯಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಹಾಗೂ ಅಧಿನಾಯಕಿ ಸೋನಿಯಾಗಾಂಧಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಶಿವಕುಮಾರ್ರವರಿಗೆ ಸೂಚ್ಯವಾಗಿ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments