ಬೆಂಗಳೂರು: ದಾಸರಹಳ್ಳಿ ವಾಸ್ತವವಾಗಿ ರಸ್ತೆಗಳು ಅಸ್ತಿತ್ವದಲ್ಲಿವೆ ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ.
ಇದಕ್ಕೆ ಪ್ರತಿಯಾಗಿ ಮಳೆ ಮುಗಿದ ನಂತರ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ. ಅನುದಾನ ಲಭ್ಯವಾದರೆ ಶೀಘ್ರ ಕಾಮಗಾರಿ ನಡೆಸುವುದು ಎಂದು ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಹೇಳಿಕೆ.
ನೀವು ಸಾಲ ಮಾಡಿ, ಕಳ್ಳತನ ಮಾಡಿ. ಆದರೆ, ಮೂಲಭೂತ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ. ಮಳೆಯ ನಂತರ ಬೆಂಗಳೂರಿನ ರಸ್ತೆಗಳು ಹಾಳಾಗಿವೆ ಎಂದು ಸಿಜೆ ರಿತು ರಾಜ್ ಅವಸ್ತಿ ನೇತೃತ್ವದ ಪೀಠ ಅಸಮಾಧಾನ ಹೊರಹಾಕಿದೆ.
ಈ ಸಂಬಂಧಿತ ಜನವರಿ ತಿಂಗಳೊಳಗೆ ಕಾಮಗಾರಿ ಪ್ರಗತಿಯ ವರದಿ ನೀಡಿ ಎಂದು ಬಿಬಿಎಂಪಿಗೆ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.