ಜೀತ ಪದ್ಧತಿ ನಿರ್ಮೂಲನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ಜೀತ ವಿಮುಕ್ತಿ-ಕರ್ನಾಟಕ ಸಂಘಟನೆಯ ಸಂಯೋಜಕ ಡಾ। ಕಿರಣ ಕಮಲ ಪ್ರಸಾದ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಪೀಠ ಈ ಆದೇಶ ಹೊರಡಿಸಿದೆ.