Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ದೂರು ದಾಖಲಿಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ದೂರು ದಾಖಲಿಸುವಂತೆ ಹೈಕೋರ್ಟ್ ಆದೇಶ
ಬೆಂಗಳೂರು , ಮಂಗಳವಾರ, 6 ನವೆಂಬರ್ 2018 (09:01 IST)
ಬೆಂಗಳೂರು : ಬೆಂಗಳೂರನ್ನು ಕಸ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸುವಂತೆ ಹೈಕೋರ್ಟ್ ಆದೇಶಿಸಿದೆ.


ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಿಚಾರ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ಹೈಕೋರ್ಟ್, ಸ್ವಚ್ಛಗೊಳಿಸಿದ ಸ್ಥಳದಲ್ಲಿ ಕಸ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಬಿಎಂಪಿ ಹಾಗೂ ನಗರ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಪೌರಕಾಯ್ದೆಯ ಅನ್ವಯ ಕಸ ಹಾಕಿದವರ ವಿರುದ್ಧ ದೂರು ದಾಖಲಿಸಲು ಕೂಡ ಸೂಚನೆ ನೀಡಿದೆ.


ಹೈಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಆಡಳಿತ ಪಕ್ಷ ನಾಯಕ ಶಿವರಾಜ್, ಪಾಲಿಕೆ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದ್ದು, ಬ್ಲಾಕ್ ಸ್ಟಾಟ್ ನಲ್ಲಿ ಕಸ ಹಾಕಿದವರ ಮಾಹಿತಿ ಪೊಲೀಸರಿಗೆ ನೀಡುತ್ತೇವೆ. ಹೈಕೋರ್ಟ್ ನಿರ್ದೇಶನದ ಕಸ ಮುಕ್ತ ನಗರವನ್ನಾಗಿ ಮಾಡಲು ಪಾಲಿಕೆಗೆ ಸಹಾಯ ಆಗಲಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವ್ಯಕ್ತಿಯನ್ನು ಕೊಂದ ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಸೇಡು ತೀರಿಸಿಕೊಂಡ ಗ್ರಾಮಸ್ಥರು