ಶಿನರಾಮ್ ಕಾರಂತ ಬಡಾವಣೆ ಜಮೀನು ಕೈ ಬಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಯಡಿಯೂರಪ್ಪ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.
ಸರಕಾರಕ್ಕೆ ನಷ್ಟವಾಗಿದೆ ಎಂಬ ವಾದದಲ್ಲಿ ಹುರುಳಿಲ್ಲ. 2014ರಲ್ಲಿ ಸರಕಾರ ಭೂ ಸ್ವಾಧೀನವನ್ನು ರದ್ದುಪಡಿಸಿದೆ. ಹಾಲಿ ಸರಕಾರ 2013 ಮೇ 13 ಕ್ಕೆ ಅಧಿಕಾರಕ್ಕೆ ಬಂದಿದೆ. ಬಳಿಕ ಭೂಸ್ವಾಧೀನ ಅಂತಿಮ ಸೂಚನೆಗೆ ಅಧಿಸೂಚನೆ ಹೊರಡಿಸಿಲ್ಲ. ಭೂ ಸ್ವಾಧೀನ ಅಂತಿಮವಾಗದೆ ನಷ್ಟವಾಗಿದೆ ಎನ್ನುವ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಎಸಿಬಿ ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಬಿಎಸ್‌ವೈ ಹೈಕೋರ್ಟ್ ಮೊರೆಹೋಗಿದ್ದರು. ಆದರೆ, ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.