ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟವಾಗಿದೆ. ಈ ತೀರ್ಪಿನಲ್ಲಿ ಸಿಎಂಗೆ ಬಿಗ್ ಶಾಕ್ ಸಿಕ್ಕಿದೆ. ತೀರ್ಪಿನ ವಿವರ ಇಲ್ಲಿದೆ.
ಪ್ರಾಸಿಕ್ಯೂಷನ್ ಗೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿದೆ. ಆ ಮೂಲಕ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಸೂಚಿಸಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಅಂಶಗಳನ್ನು ಕೋರ್ಟ್ ತಳ್ಳಿ ಹಾಕಿದೆ. ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರು ಪಾಲುದಾರರಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ.
ಕೋರ್ಟ್ ತೀರ್ಪು ಸಿಎಂ ಮುಖದಲ್ಲಿ ಚಿಂತೆಯ ಗೆರೆ ಮೂಡಿಸಿದೆ. ಈ ನಡುವೆ ಅವರ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಇತ್ತ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಅಬ್ರಹಾಂ ಕೂಡಾ ಜನಪ್ರತಿನಿಧಿಗಳ ಕೋರ್ಟ್ ಗೆ ದೂರು ನೀಡುವ ಸಾಧ್ಯತೆಯಿದೆ.
ಸಿಎಂ ವಿರುದ್ಧ ಖಾಸಗಿ ದೂರುದಾರರು ದೂರು ನೀಡಬಹುದು. ಸಂವಿಧಾನದ ವಿಧಿ 17 ಎ ಡಿ ಅಡಿಯಲ್ಲಿ ಅನುಮತಿ ನೀಡಿರುವುದು ಸರಿಯಾಗಿದೆ. ಸಚಿವ ಸಂಪುಟದ ನಿರ್ಧಾರವನ್ನು ರಾಜ್ಯಪಾಲರು ತಿರಸ್ಕರಿಸಬಹುದು ಎಂದು ಎಂ. ನಾಗಪ್ರಸನ್ನ ನೇತೃತ್ವದ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.