ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರಕಾರವು ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಪ್ರಕಟಿಸಿದರು.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಶನ ಇಲ್ಲದೆಯೇ ಲಿಖಿತ ಪರೀಕ್ಷೆ ಮೂಲಕವೇ ಇಷ್ಟೂ ಹುದ್ದೆಗಳನ್ನು ತುಂಬಲಾಗುತ್ತಿದೆ ಎಂದರು.
ಈ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಆರು ತಿಂಗಳ ಒಳಗಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದಲ್ಲದೆ, ಎಲ್ಲ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಅರ್ಹತೆ ಆಧ…