Webdunia - Bharat's app for daily news and videos

Install App

ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಗಳ ಮುಖ್ಯಾಂಶಗಳು:

Webdunia
ಮಂಗಳವಾರ, 11 ಜನವರಿ 2022 (21:32 IST)
1. ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
 
2. ಶಾಲಾ ಮಕ್ಕಳ ಕೋವಿಡ್ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
 
3. ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ.
 
4. ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಆರೋಗ್ಯ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.
 
5. ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ.
 
6.     ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಯಿತು.
 
7.      ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸೂಚಿಸಿದರು.
 
8.     ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದರು.
 
9.     ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಯಿತು.
 
10.    ಬೆಂಗಳೂರಿನಲ್ಲಿ ಕೂಡಲೇ 27  ಕೋವಿಡ್ ಕೇರ್ ಸೆಂಟರುಗಳನ್ನು ಪ್ರಾರಂಭಿಸಲು ಸೂಚಿಸಿದರು.
 
11.     ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಿದರು.
 
12.    ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚಿಸಿದರು.
 
13.    ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಲು ಸೂಚಿಸಿದರು.
 
14.   ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
 
15.    ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
 
16.    ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಸಚಿವರಾದ ಡಾ.ಕೆ. ಸುಧಾಕರ್, ಬಿ.ಸಿ. ನಾಗೇಶ್, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments