Daily Horoscope
✕

ಸೋಮವಾರ ಕ್ಕೆ ಹಿಜಾಬ್ ವಿಚಾರಣೆ ಮುಂದೂಡಿಕೆ

Webdunia
ಗುರುವಾರ, 10 ಫೆಬ್ರವರಿ 2022 (16:08 IST)
ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದೆ.
ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.
 
ಈಗ ಅರ್ಜಿಗಳ ವಿಚಾರಣೆಗೆ ವಿಶೇಷ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ.
 
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಜೈಲಿನಿಂದ ಹೊರ ಬಂದ ಸಿಜೆಪಿಯ ಸೌರವ್ ದಾಸ್, ಆಶುತೋಷ್ ರಂಕಾಗೆ ಈಗ ಮತ್ತೊಂದು ಶಾಕ್

ವಿಧಾನಸೌಧವನ್ನೇ ಸ್ಪೋಟ ಮಾಡಿದ ವಿಡಿಯೋ ಹಂಚಿದ ಭೂಪ: ಬಿಹಾರ ಮೂಲದ ವ್ಯಕ್ತಿ ಅರೆಸ್ಟ್ Video

ನಾನು ಸಚಿವ ನನ್ನ ಬಿಡಯ್ಯಾ ಎಂದರೂ ಬಿಡದ ಪೊಲೀಸ್ ಅಧಿಕಾರಿ: ಮೈಸೂರು ಜಂಬೂ ಸವಾರಿಯಲ್ಲಿ ಸಚಿವರಿಗೇ ಅವಮಾನ Video

ಕೋರ್ಟ್ ಇದೊಂದು ಪ್ರಶ್ನೆ ಮಾಡುತ್ತಿದ್ದಂತೇ ನಾವೇನೂ ಕೇಳಲ್ಲ ಎಂದು ಅರ್ಜಿ ಹಿಂಪಡೆದಿದ್ಯಾಕೆ ಸೌರವ್ ದಾಸ್, ಆಶುತೋಷ್ ರಂಕಾ

ಮುಂದಿನ ಸುದ್ದಿ
Show comments