ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ನಿಷೇಧಿಸಿ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದೆ. ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಮೇಲ್ಮನವಿ ಅರ್ಜಿಯ ವಜಾ ಪರ ತೀರ್ಪು ನೀಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದು ಮಾಡುವ ಪರವಾಗಿ ತೀರ್ಪು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ UU ಲಲಿತ್ ಅವರ ಮುಂದೆ ಬರಲಿದೆ. ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ಅಲ್ಲಿಯವರೆಗೆ ಹಿಜಾಬ್ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ನ್ಯಾಯಮೂರ್ತಿಗಳು ತ್ರಿಸದಸ್ಯ ಅಥವಾ ಪಂಚ ಸದಸ್ಯ ಪೀಠ ರಚಿಸುವ ಸಾಧ್ಯತೆಗಳಿವೆ.