ಹಿಜಾಬ್ ವಿವಾದದ ಹಿಂದೆ ಇರುವ ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಜನರಿಗೆ ತಿಳಿಸಲಿ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್-ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಗಿದ ನಂತರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಇದರ ಹಿಂದೆ ಎಸ್ ಡಿಪಿಐ- ಸಿಎಫ್ ಐ ಇರಬಹುದೆಂಬ ಶಂಕೆ ಮೂಡಿದೆಯಂತೆ.
ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಅಪರಾಧ ಹೌದಾದರೆ ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ ಮುಖ್ಯಮಂತ್ರಿಗಳೇ ಎಂದು ತಿಳಿಸಿದ್ದಾರೆ. ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ದ ಕ್ರಮ ಯಾ ವಾಗ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.