Publish Date: Tue, 19 Oct 2021 (21:52 IST)
Updated Date: Tue, 19 Oct 2021 (21:55 IST)
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರಿನ ಅಬ್ಬರ ಕಡಿಮೆಯಾಗಿದ್ದು ಅ 21(ಗುರುವಾರ) ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಚುರುಕುಗೊಂಡಿದ್ದರಿಂದ ರಾಜ್ಯದಲ್ಲಿ ಒಂದು ವಾರದಿಂದ ಎಡ ಬಿಡದೇ ಮಳೆ ಬಂದಿತ್ತು. ಸದ್ಯ ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಂಭವ ಕಡಿಮೆ ಎಂದು ಹೇಳಿದೆ.
ಅ 21 ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡುಬಂದಿವೆ ಎಂದು ಮಾಹಿತಿ ನೀಡಿದೆ.
ಯೆಲ್ಲೊ ಅಲರ್ಟ್:
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಮಳೆ ಪ್ರಮಾಣ:
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಸೋಮವಾರ 5 ಸೆಂ ಮೀ, ಕಾರ್ಕಳ, ಅಂಕೋಲಾ, ಚಿಕ್ಕಮಗಳೂರು, ಹರಪನಹಳ್ಳಿ, ತಿಪಟೂರು, ಕುಣಿಗಲ್‌ನಲ್ಲಿ ತಲಾ 1 ಸೆಂ ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.