Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೊಪ್ಪಳದಲ್ಲಿ ಐತಿಹಾಸಿಕ ತೀರ್ಪು: ದಲಿತರ ಮೇಲೆ ದೌರ್ಜನ್ಯ ನಡೆಸಿದವರಿಗೆ ತಕ್ಕ ಶಿಕ್ಷೆ ಕೊಟ್ಟ ಕೋರ್ಟ್

Court

Krishnaveni K

ಕೊಪ್ಪಳ , ಶುಕ್ರವಾರ, 25 ಅಕ್ಟೋಬರ್ 2024 (11:15 IST)
ಕೊಪ್ಪಳ: ತಾಲೂಕಿನ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದ ಅಸ್ಪೃಶ್ಯತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

2014 ರಲ್ಲಿ ನಡೆದ ಪ್ರಕರಣ ಇದಾಗಿತ್ತು. ಮರುಕುಂಬಿಯ ಹೋಟೆಲ್ ಮತ್ತು ಕ್ಷೌರದ ಅಂಗಡಿ ವಿಚಾರದಲ್ಲಿ ಭಾರೀ ಗಲಾಟೆಯಾಗಿತ್ತು. ಈ ವೇಳೆ ಸವರ್ಣೀಯರು ದಲಿತರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಗತಿಪರ ಹೋರಾಟಗಾರರು ಭಾರೀ ಹೋರಾಟ ನಡೆಸಿದ್ದರು.

ಪ್ರಕರಣದಲ್ಲಿ ಒಟ್ಟು 101 ಮಂದಿ ಆರೋಪಿಗಳಿದ್ದರು. ಈ ಪೈಕಿ 98 ಮಂದಿಗೆ ಜೀವಾವಧಿ ಶಿಕ್ಷೆ, ಉಳಿದ ಮೂವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2004 ರಲ್ಲಿ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸವರ್ಣೀಯರು ಭತ್ತ ಸಂಗ್ರಹ ಮಾಡುತ್ತಿದ್ದುದನ್ನು ದಲಿತರು ಪ್ರಶ್ನೆ ಮಾಡಿದ್ದರು. ಈ ಸಂಬಂಧ ದಲಿತರು ಮತ್ತು ಸವರ್ಣೀಯರ ನಡುವೆ ಅಸಮಾಧಾನ ಭುಗಿಲೆದ್ದಿತ್ತು. 2014 ರಲ್ಲಿ ಶಿವೆ ಚಿತ್ರಮಂದಿರದಲ್ಲಿ ಕ್ಷುಲ್ಲುಕ ಕಾರಣಕ್ಕೆ ಇಬ್ಬರು ದಲಿತ ಯುವಕರ ಮೇಲೆ ಸವರ್ಣೀಯರು ಹಲ್ಲೆ ನಡೆಸಿದ್ದರು. ಇದು ಎರಡೂ ವರ್ಗದವರ ನಡುವೆ ಘರ್ಷಣೆ ಹೆಚ್ಚಾಗಲು ಕಾರಣವಾಗಿತ್ತು. ಈ ವೇಳೆ ಸವರ್ಣೀಯರು ದಲಿತರ ಕೇರಿಗೆ ನುಗ್ಗಿ ಬೆಂಕಿ ಹಚ್ಚಿದ್ದರು. ಅಷ್ಟೇ ಅಲ್ಲದೆ, ದಲಿತರ ಕ್ಷೌರದ ಅಂಗಡಿ, ಕೂಲಿ ಕೆಲಸಕ್ಕೆ ಬಹಿಷ್ಕಾರ ಹಾಕಿದ್ದರು. ಈ ಘರ್ಷಣೆಗೆ ಸಂಬಂಧಿಸಿದಂತೆ ಈಗ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಗ್ಗಾಂವ್ ನ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ರೌಡಿ ಶೀಟರ್, 17 ಕೇಸ್ ಇದೆ: ಸೈಯದ್ ಅಝಂಪೀರ್ ಖಾದ್ರಿ