ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ.ಕುಮಾರಸ್ವಾಮಿ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಉಪಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ಈ ಸೋಲಿನ ನೈತಿಕ ಹೊಣೆ ಹೊತ್ತು ಹೆಚ್.ಕೆ.ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಪಕ್ಷದ ನಾಯಕರು ತಮ್ಮನ್ನ ಕಡೆಗಣಿಸಿದ್ದರಿಂದ ಬೇಸರಗೊಂಡ ಅವರು ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ ಎಂಬ ಮಾತು ಕೂಡ ರಾಜಕೀಯ ವಲಯದಲ್ಲಿ ಕೇಳಿಬಂದಿದೆ.