Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಳಗಾವಿ : ಜಾಧವ ನಗರದಲ್ಲಿ ಚಿರತೆ ಕಾಣಿಸಿಕೊಂಡ ಬಳಿಕ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ.
ಕಳೆದ 3 ದಿನಗಳಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಶೋಧ ಕಾರ್ಯಾಚರಣೆ ಮುಂದುವರಿದಿದೆ. 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ 7 ಬೋನು ಇರಿಸಿ, ಕ್ಯಾಮೆರಾ ಅಳವಡಿಸಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ ಸರ್ಕಾರಿ, ಖಾಸಗಿ ಶಾಲೆಗಳಿಗೆ ಡಿಡಿಪಿಐ ಮೌಖಿಕ ಆದೇಶದನ್ವಯ ಬೆಳಗಾವಿ ನಗರ ಬಿಇಒ ರಜೆ ಘೋಷಿಸಿದ್ದಾರೆ. ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ಸಹ್ಯಾದ್ರಿ ನಗರ ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ.