ಬೆಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಭಕ್ಷಿಗಾರ್ಡ್ ನಲ್ಲಿ ನಡೆದಿದೆ.
ಕಾವೇರಿ(21), ಶ್ರೀಕಾಂತ್ (13) ಮೃತಪಟ್ಟ ಮಕ್ಕಳು. ಘಟನೆಯಲ್ಲಿ ಮಕ್ಕಳ ತಂದೆ ತಾಯಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದ ಪರಿಶೀಲನೆ ನಡೆಸಿದ ಪೊಲೀರು ತಂದೆಯೇ ಮನೆಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.