ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯ ಅಸ್ತ್ರವಾಗಿ ಪೊಲೀಸರು ಗೋಲಿಬಾರ್ ಮಾಡಿದ್ದಾರೆ ಎಂದು ಉಡುಪಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೊಲೀಸರ ಗೋಲಿಬಾರ್ ನಲ್ಲಿ ಮೂವರು ಮೃತಪಟ್ಟಿದ್ದಾರೆ. ಕಲ್ಲು ತೂರಾಟದ ವೇಳೆ ನಮ್ಮ ಪೊಲೀಸರಿಗೂ ಗಾಯಗಳಾಗಿವೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕೇಂದ್ರ ಗೃಹ ಕಾರ್ಯದರ್ಶಿ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಚೆನ್ನೈ, ಹೈದರಾಬಾದ್ ನಿಂದ ತಲಾ 3 ಸಿಆರ್ ಪಿಎಫ್ ಕಂಪೆನಿ ಬರ್ತಿದೆ. ರ್ಯಾಪಿಡ್ ಆ್ಯಕ್ಷನ್ ಪೋರ್ಸ್ ಕೂಡ ಸ್ಥಳಕ್ಕೆ ಆಗಮಿಸುತ್ತಿದೆ. ಈಗಾಗಲೇ ಗರುಡ ಪೋರ್ಸ್ ಸಹ ಘಟನಾ ಸ್ಥಳದಲ್ಲಿದೆ ಎಂದು ತಿಳಿಸಿದ್ದಾರೆ.
ಹಾಗೇ ಫೇಸ್ ಬುಕ್ ನಲ್ಲಿ ಚರ್ಚೆ ಮಾಡಿ ಗಲಾಟೆಗೆ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲ್ಯಾನ್ ಮಾಡಿ ಈ ಕೃತ್ಯ ಎಸಗಿದ್ದಾರೆ. ಇದು ಪೂರ್ವ ನಿಯೋಜಿತ ಷಡ್ಯಂತ್ರ. ಇದು ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಎಂದು ಅವರು ಆರೋಪಿಸಿದ್ದಾರೆ.