Publish Date: Tue, 02 Nov 2021 (20:57 IST)
Updated Date: Tue, 02 Nov 2021 (21:03 IST)
ನಟ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ ವಿದಾಯ ಸಂಧರ್ಬದಲ್ಲಿ ಹರಿದು ಬಂದ ಜನಸಾಗರ ವನ್ನು ಅತ್ಯುತ್ತಮವಾಗಿ ನಿರ್ವಹಿಸಿ, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ಪೊಲೀಸ್ ಸಿಬ್ಬಂದಿಯನ್ನು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು ಹೃತ್ಪೂರ್ವಕವಾಗಿ, ಅಭಿನಂದಿಸಿದ್ದಾರೆ.
ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್ ಅವರೂ ಮಾತನಾಡಿ, "ಪುನೀತ್ ರಾಜಕುಮಾರ್ ರವರ ಅಕಾಲಿಕ ನಿಧನ ಹಾಗೂ ಅಂತಹ ಕ್ಲಿಷ್ಟರವಾದ ಸನ್ನಿವೇಶವನ್ನು, ವಿವರಿಸಿದ್ದಲ್ಲದೆ, ಎಲ್ಲಾ ಪೊಲೀಸ್ ಅಧಿಕಾರಿಗಳು ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ, ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತು, ಎಂದು ತಿಳಿಸಿದರು.
" ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಸಹ ನಮ್ಮ ಜೊತೆಗೆ ಪ್ರೇರಕ ಶಕ್ತಿಯಾಗಿ ನಿಂತಿದ್ದರು" ಎಂದೂ ಅವರು ಕೃತಜ್ಞತೆಯಿಂದ ಸ್ಮರಿಸಿದರು.