Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದು ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಗೃಹ ಸಚಿವರ ಸಭೆ

ಇಂದು ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಗೃಹ ಸಚಿವರ ಸಭೆ
ಬೆಂಗಳೂರು , ಬುಧವಾರ, 2 ಫೆಬ್ರವರಿ 2022 (06:17 IST)
ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು (ಫೆಬ್ರವರಿ 2) ಸಂಜೆ ಸಭೆ ನಡೆಸಲಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಚಾರ ಸುಗಮತೆ, ಸಮಸ್ಯೆಗಳು ಹಾಗೂ ಟೋಯಿಂಗ್ ವಿಚಾರ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ) ರವಿಕಾಂತೇಗೌಡ ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಯಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಫ್ಲೆಕ್ಸ್ ಮುಕ್ತ ಅಭಿಯಾನಕ್ಕೆ ಸಹಕರಿಸಿ : ಬಿಬಿಎಂಪಿ