Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದೇಶಗಳಲ್ಲಿ ಓಮಿಕ್ರಾನ್ ಜಾಸ್ತಿ ಆಗುತ್ತಿದೆ. ಇನ್ನೆರಡು ದಿನಗಳಲ್ಲಿ ಸಭೆ ಮಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಿಸ್ಮಸ್ ನ್ಯೂ ಇಯರ್ಗೆ ಏನೆಲ್ಲಾ ಮುಂಜಾಗೃತ ಕ್ರಮಗಳು ತೆಗೆದುಕೊಳ್ಳಬೇಕೆಂಬುವುದರ ಬಗ್ಗೆಯೂ ಸಭೆ ಮಾಡುತ್ತೇನೆ.ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಮುಂಜಾಗ್ರತಾ ಕ್ರಮಗಳನ್ನುತೆಗೆದುಕೊಂಡಿದ್ದು, ಸಭೆಯಲ್ಲಿ ಈ ಪಾಸ್ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇನೆ. ಏರ್ಪೋರ್ಟ್ ಗಳಲ್ಲಿ ಬಿಗಿಯಾದ ಕ್ರಮ ತೆಗೆದುಕೊಂಡಿದ್ದೇವೆ. ಏರ್ಪೋರ್ಟ್ ನಲ್ಲಿ ನೆಗೆಟಿವ್ ಬಂದವರಿಗೆ ಮನೆಯಲ್ಲಿ ಕ್ವಾರೆಂಟೈನ್ ಆಗಬೇಕು, ಅವರ ಮೇಲೆ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ ಎಂದು ಹೇಳಿದ್ದಾರೆ.