ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೊಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್‌ಪಿಜಿ ಆಸ್ಪತ್ರೆಯ ವೈದ್ಯ ಡಾ.ಶ್ರೀನಿವಾಸ್, ತಿಂಗಳಿಗೆ ಸರಾಸರಿ 2ರಂತೆ ಕಳೆದ 4 ವರ್ಷಗಳ ಅವಧಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ನಡೆಸಿರುವುದು ಪತ್ತೆಯಾಗಿದೆ.ಇನ್ನು ಭ್ರೂಣವೊಂದಕ್ಕೆ ವೈದ್ಯ ಡಾ.ಶ್ರೀನಿವಾಸ್ 5-50 ಸಾವಿರ ರು.ಗಳವರೆಗೆ ಹಣ ಪಡೆಯುತ್ತಿದ್ದ ಎಂದು ಹೇಳಲಾಗಿದೆ.