Select Your Language

Notifications

webdunia
webdunia
webdunia
webdunia

ಬೆಂಗಳೂರು ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿಗಾಳಿ

ಬೆಂಗಳೂರು ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿಗಾಳಿ

Sampriya

ಬೆಂಗಳೂರು , ಬುಧವಾರ, 1 ಮೇ 2024 (14:08 IST)
ಬೆಂಗಳೂರು: ರಾಜ್ಯದಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ 25 ಜಿಲ್ಲೆಗಳಿಗೆ ಬುಧವಾರದಿಂದ ಐದು ದಿನಗಳು ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

 ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಎಚ್ಚರಿಕೆ ನೀಡಿದೆ.

ಮೈಸೂರು, ಮಂಡ್ಯ, ಚಿಕ್ಕಮಗಳೂರು, ಕೊಡಗು, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕು ದಿನ ಒಣಹವೆ ಇರಲಿದೆ. ಇದೇ 6ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.

 ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 4ರವರೆಗೆ ಬಿಸಿ ವಾತಾವರಣವಿರುವ ಸಂಭವವಿದೆ. ಬುಧವಾರದಿಂದ ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಐಟಿ ನೋಟಿಸ್ ಬೆನ್ನಲ್ಲೇ ಭಾರತಕ್ಕೆ ಮರಳಲು ರೆಡಿಯಾದ ಪ್ರಜ್ವಲ್ ರೇವಣ್ಣ




X
X
X
X