Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಒಂದೂವರೆ ವರ್ಷದಲ್ಲಿ ಎಲ್ಲ ಬಡವರಿಗೂ ಸೂರು ಕಲ್ಪಿಸುವ ಗುರಿ: ಎಂ.ಕೃಷ್ಣಪ್ಪ

ಒಂದೂವರೆ ವರ್ಷದಲ್ಲಿ ಎಲ್ಲ ಬಡವರಿಗೂ ಸೂರು ಕಲ್ಪಿಸುವ ಗುರಿ: ಎಂ.ಕೃಷ್ಣಪ್ಪ
ಬೆಂಗಳೂರು , ಸೋಮವಾರ, 10 ಅಕ್ಟೋಬರ್ 2016 (18:37 IST)
ಮುಂದಿನ ಒಂದೂವರೆ ವರ್ಷದಲ್ಲಿ ರಾಜ್ಯದ ಎಲ್ಲ ಬಡವರಿಗೂ ಸೂರು ಕಲ್ಪಿಸುವ ಗುರಿ ಹೊಂದಿರುವುದಾಗಿ ವಸತಿ ಸಚಿವ ಎಂ.ಕೃಷ್ಣಪ್ಪ ತಿಳಿಸಿದ್ದಾರೆ. 
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಒತ್ತುವರಿ ತೆರವು ಮಾಡಿರುವ ಜಾಗವನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೀಡಲಾಗಿದ್ದು, ಆ ಜಾಗದಲ್ಲಿ ನಗರದ ಬಡವರಿಗೆ 40 ಸಾವಿರ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
 
ಗ್ರಾಮೀಣ ಭಾಗದಲ್ಲಿ ಸೂರಿಲ್ಲದವರಿಗೆ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಹೆಸರಿನಲ್ಲಿ 20 ಸಾವಿರ ನಿವೇಶನ ನಿರ್ಮಾಣ ಮಾಡಲಾಗುವುದು. ಗೃಹ ಮಂಡಳಿ ಮೂಲಕ ನಗರದ ವಸತಿ ರಹಿತರಿಗೆ ನಿವೇಶನ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
 
ಮುಂದಿನ ಒಂದೂವರೆ ವರ್ಷದಲ್ಲಿ ಒಟ್ಟು 6.5 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಲಾಗಿದ್ದು, ಕಳೆದ ಮೂರುವರೆ ವರ್ಷದಲ್ಲಿ ನಮ್ಮ ಸರಕಾರ 8 ಲಕ್ಷ ಮನೆಗಳನ್ನು ನಿರ್ಮಿಸಿದೆ ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ಮಾಹಿತಿ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ಟೂರು ಅಣೆಕಟ್ಟಿನ ಪರಿಶೀಲನೆ ನಡೆಸಿದ ಝಾ ನೇತೃತ್ವದ ತಂಡ