ಕೊರೊನಾ ಸೋಂಕಿನ ವಿರುದ್ಧ ಹೋರಾಟ ನಡೆಸಿದ್ದ ಒಂದು ವರ್ಷದ ಮಗು ಚೇತರಿಸಿಕೊಂಡಿದೆ. ಈ ಮಗುವಿನ ಜೊತೆಗೆ ಇನ್ನೂ ಮೂವರು ಗುಣಮುಖರಾಗಿದ್ದಾರೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಲಬುರಗಿ ತಾಲೂಕಿನ ಕವಲಗಾ ಗ್ರಾಮದ ಒಂದು ವರ್ಷದ ಗಂಡು ಮಗು ಸೇರಿದಂತೆ 4 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ ಪತ್ತೆಯಾದ 53 ಜನರಲ್ಲಿ ಒಟ್ಟು 12 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 36 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ತಿಳಿಸಿದ್ದಾರೆ.