Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶಿವಮೊಗ್ಗ : ಬೆದರಿಕೆ ಪತ್ರವೊಂದು ಬಂದಿದ್ದು, ಅದರಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಅಂತಾ ಬರೆಯಲಾಗಿದೆ.
ಈ ರೀತಿಯ ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ನಾನು ಹೆದರಲ್ಲ, ಬಗ್ಗಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಅನಾಮಧೇಯ ಬೆದರಿಕೆ ಪತ್ರ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಟಿಪ್ಪು ಸುಲ್ತಾನ್ ಗೆ ಮುಸ್ಲಿಂ ಗೂಂಡಾ ಅಂತಾ ಕರೆದಿದ್ದೇನೆ ಅಂತಾ ಉಲ್ಲೇಖ ಮಾಡಿದ್ದಾರೆ. ಈ ಹೇಡಿ ಬಗ್ಗೆ ತನಿಖೆ ಮಾಡುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದೇನೆ ಎಂದರು.
ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ, ವಿಶ್ವಾಸ ಇದೆ. ಈ ಪತ್ರ ನಮ್ಮ ರಾಜ್ಯದಿಂದಲೇ ಬಂದಿರೋದು. ಹೆಚ್ಚಿನ ಭದ್ರತೆ ಅವಶ್ಯಕತೆ ಏನಿಲ್ಲ. ಗೂಂಡಾಗಳಿಗೆ ಗೂಂಡಾ ಅಂತಾ ಕರೆಯದೇ ಬೇರೆ ಪದ ಬಳಸಲು ಆಗುತ್ತದಾ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.