Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿಸೇರಿಯನ್ ಗೊಳಗಾಗಿದ್ದ ಇಬ್ಬರು ಬಾಣಂತಿಯರು ಒಂದೇ ದಿನ ಸಾವನ್ನಪ್ಪಿದ್ದು ಹೇಗೆ: ಶಾಕಿಂಗ್ ಘಟನೆ

Bellary District Hospital, Complications of Cesarean Section, Deaths from caesarean sections

Sampriya

ಬಳ್ಳಾರಿ , ಶನಿವಾರ, 16 ನವೆಂಬರ್ 2024 (16:42 IST)
ಬಳ್ಳಾರಿ: ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನ. 9 ರಂದು ಸಿಸೇರಿಯನ್ ಮೂಲಕ ಮಗುವಿಗೆ ಜನ್ಮ ನೀಡಿದ್ದ ಮೂವರು ಬಾಣಂತಿಯರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಇದೀಗ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ನ.9 ರಂದು ಹೆರಿಗೆಗೆ ಬಂದಿದ್ದ ಏಳು ಗರ್ಭಿಣಿಯರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ  ಸಿಸೇರಿಯನ್‌ಗೆ ಒಳಗಾಗಿದ್ದರು. ಇದರಲ್ಲಿ ನವೆಂಬರ್ 10ರಂದು ಇಬ್ಬರು ಬಾಣಂತಿಯರಾದ ನಂದಿನಿ ಮತ್ತು ಲಲಿತಾ ಅವರು ಸಾವನ್ನಪ್ಪಿದರೆ, ನ13ರಂದು ರೋಜಮ್ಮ ಮೃತಪಟ್ಟಿದ್ದರು. ಉಳಿದ ನಾಲ್ವರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ಬಾಣಂತಿಯರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತನಿಖೆಯಲ್ಲಿ ಅಷ್ಟೇ ಸತ್ಯಾ ಹೊರಬೀಳಲಿದ್ದು, ಮೇಲ್ನೋಟಕ್ಕೆ ಇದು ಮೆಡಿಕಲ್  ರಿಯಾಕ್ಷನ್ ಎನ್ನುವ ಅನುಮಾನ ಶುರುವಾಗಿದೆ.

ಮೂವರ ಸಾವಿಗೆ IV Fluid ಔಷಧಿಯೇ ಕಾರಣ  ಎಂಬ ಸಂಶಯ ವ್ಯಕ್ತವಾಗುತ್ತಿದೆ. ಯಾಕೆಂದರೆ ಸಿಸೇರಿಯನ್ ಬಳಿಕ ವೈದ್ಯರು ಐವಿ ಫ್ಲೂಯಿಡ್ ಹಾಗೂ ಎನ್‌ಎಸ್‌ಎಲ್‌ ಗ್ಲುಕೋಸ್‌ ಹಾಕಿದ್ದರು. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ(KSMSCL) ಕಳುಹಿಸಿದ್ದ ಗ್ಲುಕೋಸ್‌ಗಳನ್ನು ನ. 9 ರಂದು ಹಾಕಲಾಗಿತ್ತು. ಆ ಬಳಿಕ ಬಾಣಂತಿಯರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿ ನ.10 ರಂದು ನಂದಿನಿ ಹಾಗೂ ಲಲಿತಮ್ಮ ಮೃತಪಟ್ಟಿದ್ದರು. ಕೂಡಲೇ ಇನ್ನುಳಿದ ಐದು ಬಾಣಂತಿಯರನ್ನು ಬಿಮ್ಸ್‌ಗೆ ರವಾನೆ ಮಾಡಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿವೃದ್ಧಿಗೆ ಹಣವಿಲ್ಲ, ಭ್ರಷ್ಟಚಾರದ ಪಿತಾಮಹನ ಕಛೇರಿ ನವೀಕರಣಕ್ಕೆ ಕೋಟಿ ಕೋಟಿ ಹಣವಿದೆ: ಬಿಜೆಪಿ