Webdunia - Bharat's app for daily news and videos

Install App

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ: ಮತ್ತೆ ಡೆಡ್‌ಲೈನ್‌ ವಿಸ್ತರಿಸಿದ ಸರ್ಕಾರ

Sampriya
ಬುಧವಾರ, 19 ಜೂನ್ 2024 (15:03 IST)
Photo Courtesy X
ಬೆಂಗಳೂರು: ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್​ ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರವೂ ಗುಡ್​ನ್ಯೂಸ್ ನೀಡಿದೆ.

ಕರ್ನಾಟಕ ಹೈಕೋರ್ಟ್​ ಜುಲೈ 4ರ ವರೆಗೆ  ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅವಕಾಶ ನೀಡಿತ್ತು. ಆದ್ರೆ, ಇದೀಗ ರಾಜ್ಯ ಸರ್ಕಾರವೇ , ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಮೂರು ತಿಂಗಳ ಕಾಲಾವಕಾಶ ನೀಡಿದೆ. ಇದರಿಂದ ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದಿರುವ ವಾಹನ ಸವಾರರು ನಿರಾಳರಾಗಿದ್ದಾರೆ.

ಕರ್ನಾಟಕದಲ್ಲಿ ಹೆಚ್ಎಸ್‌ಆರ್‌ಪಿ  ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್​ಲೈನ್ ಕೊನೆಗೊಂಡಿದೆ. ಆದರೆ, ಕರ್ನಾಟಕ ಹೈಕೋರ್ಟ್​ ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರವು ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು.

ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ.

ಏನಿದು ಎಚ್‌ಎಸ್‌ಆರ್‌ಪಿ: ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments