ರಾಜ್ಯದಾದ್ಯಂತ ಕೋಲಾಹಲ ಸೃಷ್ಟಿಸಿದ್ದ ದುಬಾರಿ ಹ್ಯೂಬ್ಲಾಟ್ ವಾಚ್ ಪ್ರಕರಣದ ತನಿಖೆ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ ಸಿಎಂ ಸಿದ್ದರಾಮಯ್ಯರನ್ನು ಆರೋಪದಿಂದ ಮುಕ್ತಗೊಳಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಇತರ ಆರ್‌ಟಿಐ ಕಾರ್ಯಕರ್ತರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದರು.
ದೂರು ಸ್ವೀಕರಿಸಿದ ನಂತರ ಎಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದರು. ದುಬೈ ಮೂಲದ ಸಿಎಂ ಸ್ನೇಹಿತ ಡಾ. ಗಿರೀಶ್ ಚಂದ್ರ ವರ್ಮಾ ಅವರ ಹೇಳಿಕೆ ಆಧಾರದ ಮೇಲೆ ಪ್ರಾಥಮಿಕ ತನಿಖೆಯ ನಂತರ ಪ್ರಕರಣವನ್ನು ಕ್ಲೋಸ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯರ ಆಪ್ತ ಸ್ನೇಹಿತ ದುಬೈ ಮೂಲದ ಡಾ.ಗಿರೀಶ್ ಚಂದ್ರ ವರ್ಮಾ ಅವರನ್ನು ಎಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಆದರೆ. ವಿಚಾರಣೆಯಲ್ಲಿ ಸತ್ಯ ಸಂಗತಿ ಬಹಿರಂಗವಾದ ಹಿನ್ನೆಲೆಯಲ್ಲಿ ತನಿಖೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.