ಬಿಸಿಲುನಾಡಿನಲ್ಲಿ ಅದ್ಧೂರಿಯಾಗಿ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ (ಜಿ.ಪಂ.) ಹಾಗೂ ಕೃಷಿ ಇಲಾಖೆ-ಆತ್ಮ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಫಲ-ಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.
ಸೆಪ್ಟೆಂಬರ್ 17 ಹಾಗೂ 18 ರಂದು ಕಲಬುರಗಿಯ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಈ ಫಲ-ಪುಷ್ಪ ಪ್ರದರ್ಶವನ್ನು ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ವೀಕ್ಷಿಸಬಹುದಾಗಿದೆ.
ಸೆ. 17 ರಂದು ಸಂಜೆ 5 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಫಲ-ಪುಷ್ಪ ಪ್ರದರ್ಶವನ್ನು ಉದ್ಘಾಟಿಸುವರು.
ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.