Publish Date: Tue, 10 Mar 2020 (16:19 IST)
Updated Date: Tue, 10 Mar 2020 (16:24 IST)
ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ ಒದಗಿಬಂದಿದ್ದು, ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗಾಂಕ್ಷಿಗಳಿಗೆ ಬೆಂಗಳೂರು ನಗರದಲ್ಲಿ ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಭಾಗಿಯಾಗುವವರು ಆನ್ ಲೈನ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದು.
ಐಟಿ, ಡಾಟಾ ಎಂಟ್ರಿ, ವಿಮೆ, ಫೈನಾನ್ಸ್, ಟೆಲಿಕಾಂ, ಆಟೋ ಮೊಬೈಲ್ಸ್, ಮಾರ್ಕೆಟಿಂಗ್ ಸೇರಿದಂತೆ ವಿವಿಧ ಉದ್ಯಮಗಳ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ. ಮಾರ್ಚ್ 15ರ ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3 : 30 ರ ವರೆಗೆ ಉದ್ಯೋಗ ಮೇಳ ನಡೆಯಲಿದೆ.
ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿರುವ ಎಸ್ ಜಿ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ.