ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ನೀರಿನ ಹರಿವು ಭಾರಿ ಏರಿಕೆಯಾಗಿದೆ. ಪ್ರವಾಹದ ಭೀತಿಯಿಂದ ನದಿತೀರದ ಗ್ರಾಮಗಳಲ್ಲಿ ಹಾಗೂ ಸೇತುವೆಗಳಿರುವ ಕಡೆಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ತಂಡದ ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ. ಇನ್ನು, ತುಂಗಭದ್ರಾ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದು, ಗ್ರಾಮಗಳಲ್ಲಿ ಜಮೀನುಗಳು ಜಲಾವೃತವಾಗಿವೆ.ಜಮಾಪುರ, ಮುಸ್ಟೂರು, ನಂದಿಹಳ್ಳಿ, ಬೆನ್ನೂರು, ಕಕ್ಕರಗೋಳ, ಉಳೇನೂರು ಗ್ರಾಮದಲ್ಲಿ ನೂರಾರು ಎಕರೆ ಜಮೀನು ಜಲಾವೃತವಾಗಿದ್ದು, ನದಿ ನೀರು ನುಗ್ಗಿ ನೂರಾರು ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಬೆನ್ನೂರಿನ ಐತಿಹಾಸಿಕ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಒತ್ತಾಸಿದರು.