Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
37 ವರ್ಷದ ಮಹಿಳೆ ಕೊಲೆಗೀಡಾಗಿದ್ದಾಳೆ. ಪತಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. 17 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮಕ್ಕಳೂ ಇದ್ದಾರೆ.
ಆದರೆ ಇತ್ತೀಚೆಗೆ ಪತ್ನಿಯ ಶೀಲ ಶಂಕಿಸಿ ಪತಿ ಆಗಾಗ ಜಗಳವಾಡುತ್ತಿದ್ದ. ಈತನ ಕಿರುಕುಳ ತಾಳಲಾರದೇ ಪತ್ನಿ ವಿಚ್ಛೇದನ ಕೇಳಿದ್ದಳು. ಇದರಿಂದ ಕೋಪಗೊಂಡ ಪತಿ ಬೆಲ್ಟ್ ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.