ರಾಮನಗರ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ 28 ವರ್ಷದ ಯುವಕನನ್ನು ಪತಿ ಕೊಲೆ ಮಾಡಿರುವ ಘಟನೆ ಇಲ್ಲಿ ನಡೆದಿದೆ.
ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ಕೊಲೆಗೀಡಾದ ವ್ಯಕ್ತಿ ಊರಿಗೆ ತೆರಳಿದ್ದ. ಈ ವೇಳೆ ಹಬ್ಬ ಆಚರಣೆ ವೇಳೆಯೇ ಕೊಲೆ ಮಾಡಲಾಗಿದೆ. ಇದಕ್ಕೆ ಆರೋಪಿಯ ಪತ್ನಿಯ ಜೊತೆಗಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿದೆ.
ಘಟನೆ ಬಳಿಕ ಪೊಲೀಸ್ ಠಾಣೆಗೆ ತೆರಳಿ ತನ್ನ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.