Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೇಳೆಕಾಳು ಅಕ್ರಮವಾಗಿ ದಾಸ್ತಾನಿಟ್ಟರೆ ಹುಷಾರ್

ಬೇಳೆಕಾಳು ಅಕ್ರಮವಾಗಿ ದಾಸ್ತಾನಿಟ್ಟರೆ ಹುಷಾರ್
ಕಲಬುರಗಿ , ಶನಿವಾರ, 29 ಡಿಸೆಂಬರ್ 2018 (20:59 IST)
ಕೆಲವು ವರ್ತಕರು ಮತ್ತು ಮಧ್ಯವರ್ತಿಗಳು ತೊಗರಿ, ಹೆಸರುಕಾಳು ಮತ್ತು ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿರುವುದರ ವಿರುದ್ಧ ಚಾಟಿ ಬೀಸಲು ಜಿಲ್ಲಾಡಳಿತ ಸಜ್ಜಾಗಿದೆ.

ಕಲಬುರಗಿಯಲ್ಲಿ ರೈತರು ಬೆಳೆದ ತೊಗರಿಯನ್ನು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿಸಲಿದ್ದು, ಕೆಲವು ವರ್ತಕರು ಮತ್ತು ಮಧ್ಯವರ್ತಿಗಳು ತೊಗರಿ, ಹೆಸರುಕಾಳು ಮತ್ತು ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಅಕ್ರಮವಾಗಿ ದಾಸ್ತಾನಿರಿಸಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರ ಹೆಸರಿನಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬಂದಿರುತ್ತದೆ ಎಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕ ಡಾ.ಕೆ. ರಾಮೇಶ್ವರಪ್ಪ ಅವರು ತಿಳಿಸಿದ್ದಾರೆ.

      ಈ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ಇಂತಹ ಅಕ್ರಮ ವಹಿವಾಟುಗಳಲ್ಲಿ ತೊಡಗಬಾರದೆಂದು ತಿಳಿವಳಿಕೆ ನೀಡಲಾಗಿದ್ದು, ಇಂತಹ ಅಕ್ರಮ ವಹಿವಾಟುಗಳಲ್ಲಿ  ಭಾಗವಹಿಸುವವರ ವಿರುದ್ದ ಅಗತ್ಯ ವಸ್ತುಗಳ ಕಾಯಿದೆ-1955 ರಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಈ ಅಕ್ರಮ ವಹಿವಾಟುಗಳಲ್ಲಿ ತೊಡಗಿರುವವರ ಕುರಿತು ಆಯಾ ತಾಲೂಕಿನ ತಹಸೀಲ್ದಾರರಿಗೆ ಅಥವಾ ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು  ಗ್ರಾಹಕರ ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕರಿಗೆ ಮಾಹಿತಿ ನೀಡಬೇಕೆಂದು ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೆ-ಸೆಟ್ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ