Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

144 ಸೆಕ್ಷನ್ ಉಲ್ಲಂಘನೆ ಮಾಡಿದ್ರೆ ಹುಷಾರ್ ಎಂದ ಡಿಸಿ

144 ಸೆಕ್ಷನ್ ಉಲ್ಲಂಘನೆ ಮಾಡಿದ್ರೆ ಹುಷಾರ್ ಎಂದ ಡಿಸಿ
ಹಾವೇರಿ , ಸೋಮವಾರ, 23 ಮಾರ್ಚ್ 2020 (18:50 IST)
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಆದರೆ ಈ ಆದೇಶವನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳೋದು ಖಂಡಿತ.

ಹಾವೇರಿ ಜಿಲ್ಲೆಯಲ್ಲಿ ಕೊರೋನಾ (ಕೋವಿಡ್-19) ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಇದನ್ನು ಪಾಲಿಸಬೇಕು. ಉದ್ದೇಶಪೂರ್ವಕವಾಗಿ ನಿಷೇಧಾಜ್ಞೆ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಕೊರೋನಾ ಮುಂಜಾಗ್ರತಾ ಕ್ರಮ ಕುರಿತಂತೆ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಾವೇರಿ ಜಿಲ್ಲೆಯಲ್ಲಿ 1973 ದಂಡಪ್ರಕ್ರಿಯೆ ಸಂಹಿತೆ 133, 144 ಅನ್ವಯ ಕೊರೋನಾ ಅಪಾಯಕಾರಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪಾರ್ಸಲ್ ಸೇವೆ ಹೊರತುಪಡಿಸಿ ಹೋಟೆಲ್‍ಗಳನ್ನು ಬಂದ್ ಮಾಡಲಾಗಿದೆ. ಮಾರ್ಚ್ 31ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.  

ವಿದೇಶದಿಂದ ಜಿಲ್ಲೆಗೆ  ಆಗಮಿಸಿದ 150 ಜನರನ್ನು ಹೋಂ ಕ್ವಾರಂಟೈನ್‍ ಲ್ಲಿರಿಸಲಾಗಿದೆ. ಈವರೆಗೆ ಶಂಕಿತ ನಾಲ್ಕು ಜನರ ಗಂಟಲು ದ್ರವ್ಯ ಹಾಗೂ ರಕ್ತದ ಮಾದರಿಯನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲ ಪ್ರಕರಣಗಳಲ್ಲೂ ನೆಗಟಿವ್ ಬಂದಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಇಲ್ಲ ಎಂದು ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಟಿಕೆಟ್ ದರ ಮೂರು ಪಟ್ಟು - ಪ್ರಯಾಣಿಕರ ವಸೂಲಿಗೆ ಇಳಿದ ಖಾಸಗಿ ವಾಹನಗಳು