Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹೈದ್ರಾಬಾದ್ ಕರ್ನಾಟಕದಲ್ಲಿ ಎರಡನೇ ರಾಜಧಾನಿ ಮಾಡಲು ಆಗ್ರಹ

ಹೈದ್ರಾಬಾದ್ ಕರ್ನಾಟಕದಲ್ಲಿ ಎರಡನೇ ರಾಜಧಾನಿ ಮಾಡಲು ಆಗ್ರಹ
ರಾಯಚೂರು , ಗುರುವಾರ, 2 ಆಗಸ್ಟ್ 2018 (16:17 IST)
ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಬೆಳಗಾವಿ ಮಾಡಲು ವಿರೋಧ ವ್ಯಕ್ತವಾಗಿದೆ. ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿಯೇ ರಾಜ್ಯದ ಎರಡನೇ ರಾಜಧಾನಿಯಾಗಬೇಕು. ಹೀಗಂತ ಆಗ್ರಹಿಸಿ ರಾಯಚೂರಿನ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆಸಲಾಯಿತು. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಅಖಂಡ ಕರ್ನಾಟಕದ ಪರ ಘೋಷಣೆ ಕೂಗಿದರು.

ಹೈ-ಕ ಪ್ರದೇಶದಲ್ಲಿ 371 ಜೆ ಕಲಂ ಸಮರ್ಪಕ ಜಾರಿ ಆಗಬೇಕು ಎಂದು ಧರಣಿ ನಿರತ ಹೈದ್ರಾಬಾದ್ ಕರ್ನಾಟಕ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯ  ಎನ್.ಎಸ್. ಭೋಸರಾಜು ಹಾಗೂ ಜೆಡಿಎಸ್ ಪ್ರಮುಖರು ಹೋರಾಟಕ್ಕೆ ಬೆಂಬಲ ನೀಡಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಕೂಗು; ಹೋರಾಟಗಾರರು ಪೊಲೀಸ್ ವಶಕ್ಕೆ