Publish Date: Sun, 30 Apr 2023 (14:43 IST)
Updated Date: Sun, 30 Apr 2023 (14:45 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿ ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿದಿಲ್ಲ ಎಂದಿರುವ ಅವರು ಮೋದಿಗೆ ಈ ಚಾಲೆಂಜ್ ಹಾಕಿದ್ದಾರೆ.
ಟ್ವೀಟ್ನಲ್ಲೇನಿದೆ..? ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂದು ಪ್ರಶ್ನಿಸಿದ್ದಾರೆ.
ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ನರೇಂದ್ರ ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದರು.