Publish Date: Mon, 26 Jun 2023 (16:45 IST)
Updated Date: Mon, 26 Jun 2023 (16:53 IST)
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ರು. ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ನಾವು ಉತ್ತಮ ಆಡಳಿತ ನೀಡಿದರೂ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ. ನಮ್ಮದು ರಾಜ್ಯದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸಿದ ಪ್ರಾಮಾಣಿಕ ಸರ್ಕಾರ ಎಂದರು. ಕಾಂಗ್ರೆಸ್ ಸರ್ಕಾರದ ಆಸೆ, ಆಮಿಷಗಳಿಂದ ಏನಾಗಲಿದೆ ಎಂಬುದು ಗೊತ್ತಾಗಲಿದೆ. KSRTC ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ. ಡಿಸೇಲ್ ಇಲ್ಲದೇ ಬಸ್ ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣ ಆಗಲಿದೆ. ಚುನಾವಣೆಗೂ ಮೊದಲು ಎಲ್ಲವೂ ಫ್ರೀ ಅಂತ ಹೇಳಿ ಗ್ಯಾರಂಟಿಗೆ ಕಂಡಿಷನ್ ಹಾಕಿದ್ದು ಯಾಕೆ? ಒಂದೇ ತಿಂಗಳಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದ್ದು ಇದೇ ಮೊದಲು ಎಂದರು.