Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗೌರಿ ಹತ್ಯೆಯಲ್ಲಿ ಆರೆಸ್ಸೆಸ್, ಬಿಜೆಪಿ ಕೈವಾಡವಿದೆ ಎಂದು ಹೇಳಲಾರೆ: ಖರ್ಗೆ

ಗೌರಿ ಹತ್ಯೆಯಲ್ಲಿ ಆರೆಸ್ಸೆಸ್, ಬಿಜೆಪಿ ಕೈವಾಡವಿದೆ ಎಂದು ಹೇಳಲಾರೆ: ಖರ್ಗೆ
ಬೆಂಗಳೂರು , ಶನಿವಾರ, 9 ಸೆಪ್ಟಂಬರ್ 2017 (15:28 IST)
ಹಿರಿಯ ಪತ್ರಕರ್ತೆ, ವಿಚಾರವಾದಿ, ಗೌರಿ ಲಂಕೇಶ್ ಹತ್ಯೆಯಲ್ಲಿ ಆರೆಸ್ಸೆಸ್, ಬಿಜೆಪಿ ಕೈವಾಡವಿದೆ ಎಂದು ನಾನು ಹೇಳಲಾರೆ. ಸೈದ್ಧಾಂತಿಕ ವಿಚಾರದ ಹಿನ್ನೆಲೆಯಲ್ಲಿ ಹತ್ಯೆಯಾಗಿರಬಹುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಶಿಕ್ಷೆಯಾಗಬೇಕು.ರಾಜ್ಯದಲ್ಲಿ ಈಗ ಗೌರಿಲಂಕೇಶ್ ಹತ್ಯೆಯಾಗಿದೆ. ಕಳೆದ ವರ್ಷ ಕಲಬುರಗಿಯವರ ಹತ್ಯೆಯಾಗಿತ್ತು.ಆದಷ್ಟು ಬೇಗ ತನಿಖೆಯಾಗಿ ಸತ್ಯಾಂಶ ಹೊರಬರಬೇಕು ಎಂದರು.
 
ಗೌರಿ ಹತ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯರೊಂದಿಗೆ ಮತ್ತು ಗೃಹಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಹಂತಕರನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ಸೋನಿಯಾ ಕೂಡಾ ಸಿಎಂ ಸಿದ್ದರಾಮಯ್ಯ ಅವರಿಗೆ ಗೌರಿ ಹತ್ಯೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಆರೋಪಿಗಳನ್ನು ಬಂಧಿಸುವಂತೆ ನಿರ್ದೇಶನ ನೀಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ. 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಾನೂ ಕೂಡ ಆರೆಸ್ಸೆಸ್ ವ್ಯಕ್ತಿಯೇ. ಗೌರಿ ಲಂಕೇಶ್'ರನ್ನ ಹತ್ಯೆ ಮಾಡಿದ್ದೀನಾ: ಈಶ್ವರಪ್ಪ ಕಿಡಿ