Publish Date: Fri, 27 Oct 2023 (15:44 IST)
Updated Date: Fri, 27 Oct 2023 (16:12 IST)
ಸಿಎಂ, ಡಿಸಿಎಂ ಸೇರಿ ಎಲ್ಲಾ ಸಚಿವರು ಹಣತಿಂದಿಲ್ಲ ಎಂದು ಪ್ರಮಾಣ ಮಾಡಲಿ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಮಾಗಡಿಯಲ್ಲಿ ಮಾತನಾಡಿದ ಅವರು, ಅವರ ಹೇಳಿಕೆಗೆ ಮಾನ್ಯತೆ ನೀಡಬೇಕಿಲ್ಲ. ಚುನಾವಣೆ ಬಂದಾಗ ಯಾವ ಪಕ್ಷ ಅಧಿಕಾರದಲ್ಲಿರಬೇಕು ಅಂತ ಜನ ತೀರ್ಮಾನ ಮಾಡ್ತಾರೆ.
ಕಳೆದ ಐದು ತಿಂಗಳ ಹಿಂದೆ ಜನ ನಿರ್ಧಾರ ಮಾಡಿ ನಮ್ಮನ್ನ ಆಯ್ಕೆ ಮಾಡಿದ್ದಾರೆ. ಈ ಆಣೆ-ಪ್ರಮಾಣದ ಬಗ್ಗೆ ನನಗೆ ನಂಬಿಕೆ ಇಲ್ಲ. ಅವರ ಸರ್ಕಾರ ಇದ್ದಾಗ ಅವರೇನು ಮಾಡಿದ್ದಾರೆ ಅಂತಗೊತ್ತು. ನಮ್ಮ ಮೇಲೆ ಆರೋಪ ಮಾಡುವ ಬದಲು ಲೋಕಾಯುಕ್ತಕ್ಕೆ ದೂರು ಕೊಡಲಿ. ಇಲ್ಲ ಯಾವುದೇ ತನಿಖೆಗೆ ಒತ್ತಾಯ ಮಾಡಲಿ ಎಂದು ಹೆಚ್.ಡಿ. ಕುಮಾರಸ್ವಾಮಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.