ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವಾಗ ಎಸ್.ಎಂ.ಕೃಷ್ಣ ಅವರ ವಕ್ತಾರರಾದ್ರೋ ಗೊತ್ತಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಪಕ್ಷ ಸೇರುತ್ತಾರೆ ಎನ್ನುವುದು ಸುದ್ದ ಸುಳ್ಳು. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದು ಬಿಜೆಪಿ ಪಕ್ಷ ಸೇರ್ಪಡೆಯಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದರು.
ಎಸ್.ಎಂ.ಕೃಷ್ಣ ಬಿಜೆಪಿ ಪಕ್ಷ ಸೇರುತ್ತಾರೆ ಎಂದು ಹೇಳಿಕೆ ನೀಡುತ್ತಿರುವ ಬಿ.ಎಸ್.ಯಡಿಯೂರಪ್ಪ, ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಗೌರವದಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪಕ್ಷ ಸೇರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದರು.
ತಮ್ಮ ಹಿರಿತನವನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು, ಜನವರಿ 28 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ