ಬರಗಾಲದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ನನಗೆ ನೋವು ತಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ರಾಜ್ಯ ಕಾರ್ಯಕಾರಿಣಿಯಲ್ಲಿ ಬರಪರಿಸ್ಥಿತಿ ಕುರಿತಂತೆ ನಿರ್ಣಯ ಮಂಡಿಸಿದ್ದೇನೆ. ಆದ್ರೆ ನನಗೆ ಬರ ಅಂದ್ರೆ ಏನು ಅಂತಾನೇ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದು ನೋವು ತಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಭೀಕರ ಬರಗಾಲವಿರುವುದರಿಂದ ರೈತರ ಸಾಲ ಮನ್ನಾ ಮಾಡುವಂತೆ ವಿಧಾನಪರಿಷತ್‌ನಲ್ಲಿ ಒತ್ತಾಯಿಸಿದ್ದೇನೆ. ಹಲವಾರು ಪ್ರತಿಭಟನೆ ನಡೆಸಿದ್ದೇನೆ. ಆದಾಗ್ಯ ನನಗೆ ಬರ ಅಂದ್ರೆ ಏನು ಅಂತ ಗೊತ್ತಿಲ್ಲ ಎಂದು ಹೇಳಿರುವುದು ವಿಷಾದದ ಸಂಗತಿಯಾಗಿದೆ ಎಂದರು.
ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಿ ಬರಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಸರಕಾರದ ವಿರುದ್ಧ ಹೋರಾಟದ ರೂಪರೇಷೆಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.