Publish Date: Thu, 20 Apr 2023 (13:33 IST)
Updated Date: Thu, 20 Apr 2023 (11:12 IST)
ರಾಮನಗರ : ನಾಮಪತ್ರ ಸಲ್ಲಿಕೆ ಬಳಿಕ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸಂಚಾರ ಮಾಡಿ, ಕ್ಷೇತ್ರದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ.
ಇದೇ ವೇಳೆ ಚನ್ನಪಟ್ಟಣಕ್ಕೆ ಮೋದಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ, ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ.
ಹೀಗಾಗಿ ಮೋದಿ ಹೆಸರು ಹೇಳ್ಕೊಂಡು ಚುನಾವಣೆ ಮಾಡ್ತಿದ್ದಾರೆ. ಪ್ರಧಾನಿ ಮೋದಿಯವರ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ ಇದೆ. ಬಿಜೆಪಿಯ ಆಡಳಿತ ನೋಡಿ ಜನ ಬೇಸತ್ತಿದ್ದಾರೆ. ಮೋದಿ ಹೆಸರಲ್ಲಿ ಬಿಜೆಪಿ ಗೆಲ್ಲುವುದು ಕಷ್ಟ ಎಂದು ಭವಿಷ್ಯ ನುಡಿದಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್, ಬಿಜೆಪಿ, ರೈತಸಂಘದವರು ಸೇರಿ ನನ್ನನ್ನು ಸೋಲಿಸಿದ್ರು. ರಾಮನಗರದಲ್ಲೂ ನನ್ನನ್ನು ಸೋಲಿಸಲು ಅದೇ ರೀತಿ ತಂತ್ರಗಾರಿಕೆ ಮಾಡ್ತಿದ್ದಾರೆ. ಆದರೆ ರಾಮನಗರದ ಜನತೆ ಅದಕ್ಕೆ ಮಣೆಹಾಕಲ್ಲ. ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.