ಕಾವೇರಿ ಗಲಭೆಯಲ್ಲಿ ಆರ್‌ಎಸ್‌ಎಸ್ ಪಾತ್ರವಿದೆ ಎಂದು ನಾನು ಹೇಳಿಲ್ಲ. ಬಿಜೆಪಿಯವರೇ ಹೇಳಿಕೆಯನ್ನು ಕೊಟ್ಟು ಆ ವಿಚಾರವನ್ನು ಮತಷ್ಟು ಪ್ರಚಾರ ಮಾಡುತ್ತಿದ್ದಾರೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಗಲಭೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೆ ಅಷ್ಟೆ. ಒಂದು ವೇಳೆ, ಆರ್‌ಎಸ್‌ಎಸ್ ಕೈವಾಡವಿದ್ದರೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದೆ ಎಂದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ. ಇಂತಹ ಬೆಳವಣಿಗೆಗಳು ಒಳ್ಳೆಯದಲ್ಲ. ಕಾವೇರಿ ವಿವಾದ ಇತ್ಯರ್ಥಕ್ಕೆ ಪ್ರತಿಪಕ್ಷಗಳು ಸಹ ರಾಜ್ಯ ಸರಕಾರಕ್ಕೆ ಸಾಥ್ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಕೆ.ಜೆ.ಜಾರ್ಜ್‌ಗೆ ಕ್ಲೀನ್ ಚೀಟ್ ವಿವಾರ.........
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೇವಲ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ, ಅಧಿಕೃತವಾಗಿ ರಾಜ್ಯ ಸರಕಾರಕ್ಕೆ 'ಬಿ' ರಿಪೋರ್ಟ್ ಸಲ್ಲಿಸಿಲ್ಲ. ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ನಿರಪರಾಧಿಯೆಂದು ಮಾಧ್ಯಮಗಳ ಮುಖಾಂತರ ತಿಳಿದುಕೊಂಡಿದ್ದೇನೆ. ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಟ್ಟ ವಿಚಾರ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ